ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಲ್ಲಿ ಅಪಘಾತ ಸಂಭವಿಸಿದರೆ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ
ಉಡುಪಿ: ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ ಸಂತೆಕಟ್ಟೆಯ ಕಾಮಗಾರಿ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸ್ಥಳಗಳಲ್ಲಿ ಕಾಮಗಾರಿ ಕೆಲಸಗಳಿಂದ ಸಂಬಂಧಪಟ್ಟ ಗುತ್ತಿಗೆದಾರರು ಅಥವಾ ಅಭಿಯಂತರ ನಿರ್ಲಕ್ಷದಿಂದ ರಸ್ತೆ ಅಪಘಾತಗಳು ಆದಲ್ಲಿ ಸಂಬಂದಪಟ್ಟ ಅಭಿಯಂತರರುಗಳ ವಿರುದ್ಧವೂ ಸಹ ಕ್ರಿಮಿನಲ್ ಕೇಸ್‌ಗಳನ್ನು ಹಾಕಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು





