ಮಂಗಳೂರು: ಒಂದೇ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಜಗಳದ ವೀಡಿಯೊ ವೈರಲ್
ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಒಂದೇ ಕಾಲೇಜಿನ ವಿದ್ಯಾರ್ಥಿಗಳು ಜಗಳ ಮಾಡಿದ ಘಟನೆಯೊಂದು ಮಂಗಳೂರಿನ ಹೊರವಲಯದಲ್ಲಿ ನಡೆದಿದೆ. ಈ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಾಲೇಜು ಫೆಸ್ಟ್ ವಿಷಯಕ್ಕೆ ಕುರಿತಂತೆ ಜ್ಯೂನಿಯರ್ಸ್-ಸೀನಿಯರ್ಸ್ ನಡುವೆ ಮಾತಿನ ಗಲಾಟೆ ನಡೆದಿದೆ. ಮಂಗಳೂರಿನ ಹೊರವಲಯ ವಳಚ್ಚಿಲ್‌ನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಈ ರೀತಿ ಜಗಳ ಮಾಡಿಕೊಂಡವರು. ಕೈಗೆ ಸಿಕ್ಕ ವಸ್ತುಗಳಿಂದ ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಪೊಲೀಸರು ಕೂಡಲೇ ಮಧ್ಯಪ್ರವೇಶ ಮಾಡಿದ್ದು, ಎರಡೂ ಗುಂಪುಗಳನ್ನು ಸಮಾಧಾನ ಮಾಡಿದ್ದಾರೆ ಎಂದು ವರದಿಯಾಗಿದೆ.





