February 3, 2026

ಮಂಗಳೂರು: ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ ನೌಫಲ್

0
image_editor_output_image-1281528085-1715056943696

ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ.

ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!