March 24, 2026

ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿ: ಯುವಕ ಮೃತ್ಯು

0
image_editor_output_image-1670114073-1715074060403.jpg

ಕುಷ್ಟಗಿ: ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಮುತ್ತಣ್ಣ ಈರಪ್ಪ ಸಾಹುಕಾರ (28) ಮೃತ ಯುವಕ ಎಂದು ತಿಳಿದುಬಂದಿದೆ. ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಯುವಕ, ಹಾವೇರಿಯ ಗ್ರಾಮೀಣ ಬ್ಯಾಂಕ್‌ ನಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ.

ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಗೆ ಮತ ಚಲಾಯಿಸಲು ಹಾವೇರಿಯಿಂದ ಗುನ್ನಾಳ ಗ್ರಾಮಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!