May 11, 2026

ಮಂಗಳೂರು: ವೈದ್ಯಾಕೀಯ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ: 17 ವರ್ಷದ ಬಾಲಕ ವಶಕ್ಕೆ

0
first-information-report

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ನಗ್ನ ಚಿತ್ರ ಸೆರೆ ಕುರಿತು ನಗರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮೊಬೈಲ್ ರಿಂಗಿಣಿಸಿದ್ದು, ಭದ್ರತಾ ಸಿಬ್ಬಂದಿ ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು.

ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!