ಅಕ್ಕನ ಮನೆಯಲ್ಲೇ ಕಳ್ಳತನ: 52 ಲಕ್ಷ ರೂ. ನಗದು, ಚಿನ್ನಾಭರಣ ಸಹಿತ ತಂಗಿಯ ಬಂಧನ
ಬೆಂಗಳೂರು: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನು ಕೆಂಗೇರಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ನಗದು ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು.
ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.




