ರೌಡಿಶೀಟರ್ ಕೊಲೆ ಪ್ರಕರಣ: ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.ಕೊಲೆ ನಡೆದ 10 ತಿಂಗಳಲ್ಲಿ ವಿಚಾರಣೆ ಮುಗಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಕಲಬುರಗಿ ಜೈಲಿನಲ್ಲಿದ್ದುಕೊಂಡೇ ಯಾಚೇನಹಳ್ಳಿ ಚೇತು ಕೊಲೆ ಮಾಡಿಸಿದ್ದ. ಮಂಡ್ಯ ಶಿವು ಅಲಿಯಾಸ್ ಶಿವಕುಮಾರ್, ಉಲಿವಾಲ ಚೇತು, ರಾಕಿ ಸೇರಿದಂತೆ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ.




