July 27, 2024

ಬಿ.ಸಿ.ರೋಡ್: ಲಾಡ್ಜ್ ನಲ್ಲಿ ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

0

ಮಂಗಳೂರು: ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಮೇ 7ರಂದು ಬಿ.ಸಿ.ರೋಡಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ.

ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃತದೇಹದ ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!