ಮಂಗಳೂರು: ರಿಕ್ಷಾ ಚಾಲಕರು, ಪ್ರಯಾಣಿಕರ ನಡುವೆ ಹೊಡೆದಾಟ
ಮಂಗಳೂರು: ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ತಳ್ಳಾಟ, ನೂಕಾಟ ನಡೆದಿರುವುದಾಗಿ ವರದಿಯಾಗಿದೆ.
ಮಹಿಳೆಯರು ಎಂಬುದನ್ನೂ ನೋಡದೆ ಅಸಭ್ಯವಾಗಿ ವರ್ತಿಸಿ ರಿಕ್ಷಾ ಚಾಲಕರು ಹೊಡೆದಾಟಕ್ಕಿಳಿದಿರುವುದು ಕಂಡು ಬಂದಿದೆ. ಸೆಂಟ್ರಲ್ ರೈಲ್ವೇ ನಿಲ್ದಾಣದ ಹೊರಗೆ ನಡೆದ ಹೊಡೆದಾಟ ಮತ್ತು ತೀವ್ರ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.





