3.5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್ PDO
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಅರಳು ಮಲ್ಲಿಗೆ ಪಂಚಾಯತ್ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದಾಗಿ ವರದಿಯಾಗಿದೆ.
ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. 3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ರೆಂಡ್ ಆ್ಯಂಡ್ ಆಗಿ ಹಿಡಿದಿದ್ದಾರೆ. ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.




