March 24, 2026

ಪುತ್ತೂರು: ಮದುವೆಯಲ್ಲಿ ಹುಡುಗಿಯರ ಫೋಟೊ ಕ್ಲಿಕ್ಕಿಸಿ ಸಿಕ್ಕಿಬಿದ್ದ ಇಬ್ಬರು ಯುವಕರಿಗೆ ಧರ್ಮದೇಟು

0
image_editor_output_image-1198158835-1715227004743.jpg

ಪುತ್ತೂರು: ಆಮಂತ್ರಣ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ.

ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್‌ ಪೋಸ್ಟ್‌ ವೈರಲ್‌ ಆಗಿದೆ.

ಪುತ್ತೂರು ಕಾವು ದೇವಸ್ಥಾನವೊಂದರ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿ ಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು.

ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್‌ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!