ಸುಳ್ಯ: ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ
ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ತಮ್ಮ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸುಳ್ಯ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿ, ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿ ರಶ್ಮಿತಾ(16) ಎಂದು ಗುರುತಿಸಲಾಗಿದೆ.




