May 6, 2026

SSLC ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

0
image_editor_output_image1457607365-1715320170557.jpg

ಮಂಡ್ಯ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಪ್ಪಾಗಿ ತಿಳಿದು ನೇಣಿಗೆ ಶರಣಾಗಿರುವುದು ಮಂಡ್ಯದಲ್ಲಿ ವರದಿಯಾಗಿದೆ.

ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.

ಆದರೆ ಪರೀಕ್ಷೆಯಲ್ಲಿ ಫೇಲ್ ಆಗಿಬಿಟ್ಟೆ ಎಂದು ತಪ್ಪಾಗಿ ತಿಳಿದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣಿಗೆ ಶರಣಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!