March 17, 2026

ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಯುವಕನ ಹತ್ಯೆ 

0
image_editor_output_image367403411-1715332683446.jpg

ಕಲಬುರಗಿ: ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಬಗ್ಗೆ ವರದಿಯಾಗಿದೆ.

ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ. ದುಷ್ಕರ್ಮಿಗಳು ಜಾವೀದ್ರನ್ನು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆದೊಯ್ದಿದ್ದರು.

ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಹತ್ಯೆಗೈದ ಆರೋಪ ಕೇಳಿಬಂದಿದೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!