March 17, 2026

ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

0
image_editor_output_image345548164-1715410017257.jpg

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಕಲಬುರಗಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ನಿನ್ನೆ ಸಂಜೆ (ಮೇ.10) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಪುಷ್ಪಾ ತನ್ನ ಪ್ರಿಯಕರ ಕಿರಣ್ಗೆ ಮದುವೆ ಮಾಡಿಕೋ ಎಂದು ಒತ್ತಾಯ ಮಾಡ್ತಿದ್ದರು. ಆದರೆ ಪುಷ್ಪಾ ಹಾಗೂ ಕಿರಣ್ಗೆ ಜಾತಿ ವಿಚಾರ ಅಡ್ಡ ಬಂದಿತ್ತು. ಅನ್ಯ ಜಾತಿ ಹಿನ್ನೆಲೆ ಯುವತಿ ಮದುವೆಗೆ ಕಿರಣ್ ಮನೆಯವರು ನಿರಾಕರಿಸಿದ್ದರು. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!