ಭೀಕರ ರಸ್ತೆ ಅಪಘಾತ: ಕನ್ನಡದ ಕಿರುತೆರೆ ನಟಿ ಸಾವು
ಹೈದರಾಬಾದ್: ಭೀಕರ ರಸ್ತೆ ಅಪಘಾತಕ್ಕೆ ಕನ್ನಡದ ಕಿರುತೆರೆ ನಟಿಯೊಬ್ಬರು ಸಾವನಪ್ಪಿದ ಘಟನೆ ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಡೆದಿದೆ.
ಮೃತರನ್ನು ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಎಂದು ಗುರುತಿಸಲಾಗಿದೆ.
ಮೆಹಬೂಬ್ ನಗರದಲ್ಲಿ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ದುರಂತದಲ್ಲಿ ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪವಿತ್ರ ಜಯರಾಂ ಅವರು ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಕನ್ನಡದ ರೋಬೋ ಫ್ಯಾಮಿಲಿಯಲ್ಲಿ ಕಿರುತೆರೆಗೆ ಎಂಟ್ರಿಕೊಟ್ಟಿದ್ದರು.




