May 6, 2026

ಕಲ್ಲಡ್ಕ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

0
image_editor_output_image-1433928246-1715580223576.jpg

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಅಪಾಯದಿಂದ ಪಾರಾದ ಕಾರು ಚಾಲಕ ತೌಶೀಫ್ ಎಂದು ಗುರುತಿಸಲಾಗಿದೆ. ತೌಶೀಫ್ ಅವರು ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದು, ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಘಟನೆ ನಡೆದಿದೆ. ಕಾರು ಚಾಲಕ ತೌಶೀಫ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!