May 6, 2026

ಉಡುಪಿ: ಸಿಟಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಮಹಿಳೆಗೆ ಸಾರ್ವಜನಿಕರಿಂದ ಧರ್ಮದೇಟು

0
image_editor_output_image1400312008-1715581031951.jpg

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಈ ವೇಳೆ ಕದಿಯಲು ಬಂದ ಕಳ್ಳಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಖತರ್ನಾಕ್ ಮೊಬೈಲ್ ಕಳ್ಳತನ ಗ್ಯಾಂಗ್ನಲ್ಲಿದ್ದ ಇಬ್ಬರು ಕಳ್ಳಿಯರು ಸ್ಥಳದಿಂದ ಎಸ್ಕೇಪ್ ಆಗಿದ್ದು, ಬಸ್ ಹತ್ತುವ ವೇಳೆ ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ್ದರು.

ಇನ್ನು ಸೆರೆ ಸಿಕ್ಕ ಓರ್ವಳನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಬಳಿಕ ಆಕೆಯನ್ನು ಸಾರ್ವಜನಿಕರು ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!