May 6, 2026

ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್: ಆಕ್ರೋಶ ಹೊರಹಾಕಿದ ರಘುಪತಿ ಭಟ್

0
image_editor_output_image986341018-1715581263714.jpg

ಮಂಗಳೂರು: ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಈ ಬಗ್ಗೆ ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ ಎಂದು ಮಾಜಿ ಶಾಸಕ ರಘುಪತಿ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, “ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

“1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು” ಎಂದು ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಕೈತಪ್ಪಿದನ್ನು ನೆನಪಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!