8 ಮಂದಿ ಡ್ರಗ್‌ಪೆಡ್ಲರ್ ಬಂಧನ: 2.74 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರು: ಮಾದಕವಸ್ತುಗಳ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಮೂವರು ವಿದೇಶಿಯರು ಸೇರಿ ೮ ಮಂದಿ ಡ್ರಗ್‌ಪೆಡ್ಲರ್ ಗಳನ್ನು ಬಂಧಿಸಿ ಭರ್ಜರಿ ಬೇಟೆಯಾ ೨.೭೪ ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಪಿಗೆಹಳ್ಳಿಯ ಬಳಿ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಡ್ರಗ್‌ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿ ೫೦ ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಕ್ರಿಸ್ಟಲ್, ಕೊಕೇನ್, ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಮೂವರು ವಿದೇಶಿ ಪ್ರಜೆಗಳು ಬಿಜಿನೆಸ್ ಹಾಗೂ ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ವಾಸವಾಗಿ ಮೋಜಿನ ಜೀವನ ನಡೆಸಲು ಹಾಗೂ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ವಾಸವಾಗಿರುವ ಅವರ ದೇಶದ ಪ್ರಜೆಗಳಿಂದ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕ್ರಿಸ್ಟಲ್, ಕೊಕೇನ್‌ನ್ನು ಕಡಿಮೆ ಬೆಲೆಗೆ ಖರೀದಿಸಿ ನಂತರ ಗ್ರಾಹಕರುಗಳಿಗೆ ಎಂ.ಡಿ.ಎಂ.ಎ ಕ್ರಿಸ್ಟಲ್ ಮತ್ತು ಕೊಕೇನ್‌ನ್ನು ೧ ಗ್ರಾಂ ಗೆ ೧೦ರಿಂದ ೧೨ ಸಾವಿರ ಬೆಲೆಗೆ ಮಾರಾಟ ಮಾಡುತ್ತ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ತಿಳಿದು ಬಂದಿದೆ.
ಬಂಧಿತರ ವಿರುದ್ದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಹಾಗೂ ವಿದೇಶಿ ಕಾಯ್ದೆ ರೀತ್ಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.