ಪ್ರೀತಿ ನಿರಾಕರಿಸಿದ ಕಾರಣಕ್ಕೆ ಚಾಕುವಿನಿಂದ ಇರಿದು ಯುವತಿಯ ಕೊಲೆ: ಆರೋಪಿ ಗಿರೀಶ್ ಸಾವಂತ್ ಎಸ್ಕೇಪ್

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವೀರಾಪುರದಲ್ಲಿ ನಡೆದಿರುವುದು ವರದಿಯಾಗಿದೆ.
ವೀರಾಪುರ ಓಣಿಯ ದೇವಿಗುಡಿ ನಿವಾಸಿ ಅಂಜಲಿ (20) ಕೊಲೆಯಾದ ಯುವತಿ. ಗಿರೀಶ್ ಸಾವಂತ್ (21) ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದ್ದು, ಈತ ಪರಾರಿಯಾಗಿದ್ದಾನೆ.
ಇಂದು ಬೆಳ್ಳಂಬೆಳಗ್ಗೆ ಯುವತಿಯ ಮನೆಯ ಬಾಗಿಲು ತಟ್ಟಿದ ಗಿರೀಶ್, ಬಾಗಿಲು ತೆರೆಯುತ್ತಿದ್ದಂತೆಯೇ ಆಕೆಯ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.