May 6, 2026

4 ತಿಂಗಳ ಹಿಂದಷ್ಟೇ ಪ್ರೀತಿಸಿ  ಮದುವೆಯಾಗಿದ್ದ ನವ ವಿವಾಹಿತ ಜೋಡಿ ಆತ್ಮಹತ್ಯೆ

0
image_editor_output_image1580285634-1715835822321.jpg

ವಿಜಯಪುರ: ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ನೇಣಿಗೆ ಶರಣಾದ ಘಟನೆ ವಿಜಯಪುರದಲ್ಲಿ ನಡೆದಿದೆ.

ಮನೋಜ್ ಕುಮಾರ್ ಪೋಳ (30), ರಾಖಿ (23) ನೇಣಿಗೆ ಶರಣಾದ ದಂಪತಿ.

ವಿಜಯಪುರ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ 4 ತಿಂಗಳ ಹಿಂದೆ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.

ಸೋಮವಾರ ತಡರಾತ್ರಿ ಊಟ ಮಾಡಿದ ಬಳಿಕ ನವ ವಿವಾಹಿತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜ್ ಕುಮಾರ್ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದ ವೇಳೆ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!