ಚಿಕ್ಕಮಗಳೂರಿನಲ್ಲಿ ಶೂಟೌಟ್: ಯುವಕ ಸಾವು
ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕೆರೆಮಕ್ಕಿ ಗ್ರಾಮದ ಸಂಜು (33) ಶೂಟೌಟ್ ನಲ್ಲಿ ಮೃತಪಟ್ಟಿರುವ ಯುವಕ.
ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಮೃತದೇಹದ ಸಮೀಪವೇ ತೋಟದ ಬೇಲಿಯಲ್ಲಿ ತೋಟಕೋವಿಯೊಂದು ಪತ್ತೆಯಾಗಿದೆ.




