ದೇವಸ್ಥಾನದ ಅರ್ಚಕನಿಂದ ಟಿವಿ ನಿರೂಪಕಿಯ ಮೇಲೆ ಅತ್ಯಾಚಾರ
ಚೆನ್ನೈ: ಪಾರಿಸ್ ಕಾರ್ನರ್‌ನಲ್ಲಿರುವ ಜನಪ್ರಿಯ ದೇವಸ್ಥಾನದ ಅರ್ಚಕರ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದೆ.
ಟಿವಿ ನಿರೂಪಕಿಯೊಬ್ಬರು ತನ್ನ ಮೇಲೆ ಅತ್ಯಾಚಾರ ನಡೆದಿರುವುದರ ಬಗ್ಗೆ ವಿರುಗಂಬಾಕ್ಕಂ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅತ್ಯಾಚಾರದ ಆರೋಪದ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಸದ್ಯಕ್ಕೆ ಇಬ್ಬರ ವಿಚಾರಣೆಯನ್ನು ನಡೆಸಲಾಗುತ್ತಿದೆ.
ಮಹಿಳೆ ನೀಡಿದ ದೂರಿನ ಪ್ರಕಾರ, ‘ಅರ್ಚಕ ಕಾರ್ತಿಕ್ ಮುನುಸಾಮಿ 2022ರ ಕೊನೆಯಲ್ಲಿ ಮತ್ತು 2023ರ ಆರಂಭದಲ್ಲಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ತೀರ್ಥಕ್ಕೆ ಅಮಲು ಬರುವ ಔಷಧಿ ಹಾಕಿ ಅದನ್ನು ನೀಡಿದ ಬಳಿಕ ಅತ್ಯಾಚಾರ ನಡೆಸಿದ್ದಾರೆ.
ಈ ಬಗ್ಗೆ ಅವರೊಂದಿಗೆ ಜಗಳವಾಡಿದ ನಂತರ ಆತ ನನಗೆ ತಾಳಿ ಕಟ್ಟಿ ಮದುವೆಯಾಗುವ ಮೂಲಕ ಒಟ್ಟಿಗೆ ಜೀವನ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಮದುವೆಯಾಗಬೇಕೆಂದು ನಿನ್ನ ಹೊಟ್ಟೆಯಲ್ಲಿರುವ ಭ್ರೂಣವನ್ನು ಗರ್ಭಪಾತ ಮಾಡುವಂತೆ ಒತ್ತಾಯಿಸಿದರು. ಆದರೆ, ಹಣಕ್ಕಾಗಿ ಇನ್ನೊಬ್ಬ ಪುರುಷನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸಿ ಈಗ ಹಿಂಸೆ ನೀಡುತ್ತಿದ್ದಾರೆ ಎಂದು ಆ ಮಹಿಳೆ ದೂರು ನೀಡಿದ್ದಾರೆ.