December 16, 2025

2 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಎಸ್ಸೈ

0
image_editor_output_image-707435594-1716014511591.jpg

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜೂಜು (ಇಸ್ಪೀಟ್) ಆಡಿಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್‌ಐ ಮತ್ತು ಕಾನ್‌ಸ್ಟೆಬಲ್‌ ಬಿದ್ದಿದ್ದಾರೆ.

ತಡಸ ಪೊಲೀಸ್‌ ಠಾಣೆಯ ಪಿಎಸ್‌ಐ ಶರಣಬಸಪ್ಪ ಕಾಂದೆ ಮತ್ತು ಕಾನ್‌ಸ್ಟೆಬಲ್‌ ಸುರೇಶ ಮಾನೋಜಿ ಬಂಧಿತರು.

ಜೂಜು ಆಡಿಸುವ ಸಂಬಂಧ ಪ್ರಭಾಕರ ಈರಪ್ಪ ಬೆಟ್ಟದೂರ ಅವರಿಗೆ ₹5 ಲಕ್ಷ ಲಂಚದ ಬೇಡಿಕೆ ಇಟ್ಟು, ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ ₹2 ಲಕ್ಷ ಮುಂಗಡ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖ‌ರ್ ನೇತೃತ್ವದಲ್ಲಿ ದಾಳಿ ನಡೆಯಿತು.

Leave a Reply

Your email address will not be published. Required fields are marked *

error: Content is protected !!