September 26, 2026

KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

0
image_editor_output_image1447103055-1716016624001.jpg

ದೇವನಹಳ್ಳಿ: ಕೋಲಾರದಿಂದ ಚಿಕ್ಕಬಳ್ಳಾಪುರದ ಕಡೆಗೆ ಗುರುವಾರ ಸಂಜೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ವಿಜಯಪುರಕ್ಕೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಘಟನೆಯು ಮೇ 16ರಂದು ನಡೆದಿದೆ.

ಚಿಕ್ಕಬಳ್ಳಾಪುರದ ಡಿ.ಶಾಹಿದಾಬಿ (47) ಮೃತರು. ಆಂಧ್ರಪ್ರದೇಶದ ಪುಂಗನೂರಿನಿಂದ ಬಂದಿದ್ದ ಮಹಿಳೆ, ಕೋಲಾರದಿಂದ ಚಿಕ್ಕಬಳ್ಳಾಪುರಕ್ಕೆ ತನ್ನ ಸಂಬಂಧಿಕರ ಮನೆಗೆ ಹೋಗಲು ಪ್ರಯಾಣಿಸುತ್ತಿದ್ದರು.

 

ಬಸ್‌ ವಿಜಯಪುರಕ್ಕೆ ಬಂದಾಗ ಅಕ್ಕಪಕ್ಕ ಕುಳಿತಿದ್ದ ಪ್ರಯಾಣಿಕರು, ಇಳಿಯುವಂತೆ ತಿಳಿಸಲು ಮಾತನಾಡಿಸಿದರು. ಆಗ ಅವರಿಂದ ಪ್ರತಿಕ್ರಿಯೆ ಬರಲಿಲ್ಲ.

ಆಗ ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಅದಕ್ಕೂ ಪ್ರತಿಕ್ರಿಯೆ ನೀಡದ ಕಾರಣ, ಸಾರಿಗೆ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದ ಬಸ್ಸಿನ ನಿರ್ವಾಹಕ ಬಸ್ ಅನ್ನು ಪೊಲೀಸ್ ಠಾಣೆ ಮುಂದೆ ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You may have missed

error: Content is protected !!