February 3, 2026

ಮುಲ್ಕಿ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

0
image_editor_output_image862768591-1716189524978.jpg

ಮುಲ್ಕಿ: ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.

ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (೨೦) ಅತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಮೃತ ಕಾರ್ತಿಕ್ ಪೂಜಾರಿ ತನ್ನ ತಾಯಿ ಅಜ್ಜಿ ಜೊತೆ ಮೈಲೊಟ್ಟಿನಲ್ಲಿ ನೆಲೆಸಿದ್ದು, ಕಳೆದ ಕೆಲವು ತಿಂಗಳ ಹಿಂದೆ ಚಿತ್ರದುರ್ಗದಲ್ಲಿ ಸಂಬಂಧಿಕರ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸಕ್ಕೆ ಸೇರಿದ್ದನು.

ಈ ನಡುವೆ ಕಾಲೇಜಿನಲ್ಲಿರುವಾಗ ಕಾರ್ತಿಕ್ ಪೂಜಾರಿ ಸಹಪಾಠಿ ಶರಣ್ಯ ಎಂಬಳನ್ನು ಪ್ರೀತಿಸುತ್ತಿದ್ದ. ಇಬ್ಬರು ಅಪ್ರಾಪ್ತರಾದ ಕಾರಣ ಮದುವೆಗೆ ಅನುಮತಿ ಸಿಕ್ಕಿಲ್ಲ.

ಪ್ರಾಪ್ತರಾದ ಬಳಿಕ ಮದುವೆ ಮಾಡುವ ಬಾಂಡ್ ಪೇಪರ್ ಮೂಲಕ ಸಮ್ಮತಿ ದೊರೆತಿತ್ತು ಎನ್ನಲಾಗಿದೆ.

ಈ ನಡುವೆ ಶರಣ್ಯ ಮಾನಸಿಕ ಖಿನ್ನತೆಗೆ ಒಳಗಾಗಿ ಮೂಡುಬಿದ್ರೆಯ ತನ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಳು. ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!