ಬೈಂದೂರು: ಮನೆಯ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಮೃತ್ಯು
ಬೈಂದೂರು: ಮನೆಯ ಗೇಟಿನ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಶಿರೂರು ಗ್ರಾಮದ ಹಡವಿನಕೋಣೆ ಮುದ್ರಮಕ್ಕಿಯಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದೆ.
ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟವರು. ಶನಿವಾರ ತಡರಾತ್ರಿ ಸುರಿದ ಗಾಳಿ-ಮಳೆಗೆ ಹಡವಿನ ಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.
ಇರ್ಷಾದ್ ಅವರು ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆಸೆಯುವ ಸಲುವಾಗಿ ರವಿವಾರ ಬೆಳಗ್ಗೆ ಗೇಟ್ ದಾಟಿ ಹೊರಕ್ಕೆ ಬಂದಿದ್ದು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದು, ವಿದ್ಯುತ್ ಆಘಾತಕ್ಕೆ ಒಳಗಾಗಿ ಸ್ಥಳದಲ್ಲಿಯೇ ಮೃತಪಟ್ಟರು.




