February 4, 2026

ಮಂಗಳೂರು: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ, ಕಲ್ಲಾಪು ನಿವಾಸಿ ಸಾವು

0
image_editor_output_image1958919405-1716211582060.jpg

ಮಂಗಳೂರು, ಮೇ 20: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಮೃತರನ್ನು ನಮ್ಮ ಕುಡ್ಲ – ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಎಂದು ಗುರುತಿಸಲಾಗಿದೆ.

ಇವರು ರಸ್ತೆ ಬದಿ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದ ವೇಳೆ ಬಂಟ್ವಾಳ ಕಡೆಯಿಂದ ಹೆದ್ದಾರಿಯಲ್ಲಿ ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿ ಹರೀಶ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!