February 4, 2026

ಬಂಟ್ವಾಳ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ: ಸಜಿಪದ ಅಲ್ತಾಫ್ ಮೃತ್ಯು

0
Screenshot_20240520-175349_Chrome.jpg

ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು‌ ಸಂಜೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟ ಯುವಕ.
ಬಿ.ಸಿ ರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ. ಪಲ್ಟಿಯಾಗುವ ಸಂದರ್ಭದಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.

ರಸ್ತೆಗೆ ಎಸೆದ ರಭಸಕ್ಕೆ ಯುವಕನ ತಲೆಗೆ ಗಂಭೀರವಾದ ಗಾಯವಾಗಿತ್ತು. ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!