March 17, 2026

ಕುಂದಾಪುರ: ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ನಿರಾಕರಣೆ: ಬೇಸರಗೊಂಡ ಬಾಲಕ ಆತ್ಮಹತ್ಯೆ

0
image_editor_output_image-1204494235-1716269846868.jpg

ಕುಂದಾಪುರ: ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡದೇ ಬೈದರೆಂದು ಬೇಸರಗೊಂಡ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ.

ಇಲ್ಲಿನ ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ನಿತಿನ್ ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದು ಪ್ರಸ್ತುತ ಸಾಲಿನಲ್ಲಿ ನಡೆದ ಎಸ್‌.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು ಸೋಮವಾರ ಕಾಲೇಜಿಗೆ ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ಹೋದಾಗ ಶಿಕ್ಷಕರು ಬೈದ್ದಿದ್ದಾರೆ ಎನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರ ಆರೋಪವಾಗಿದೆ.

ಬೈಂದೂರು ಆರಕ್ಷಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!