May 6, 2026

ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ: ಬಂಟ್ವಾಳ ಮೂಲದ ತಾಯಿ-ಮಗ ಮೃತ್ಯು

0
image_editor_output_image-1398081052-1716270492914.jpg

ಮಂಗಳೂರು: ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತವಾಗಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತಪಟ್ಟವರನ್ನು ಪಾಣೆಮಂಗಳೂರು ಬೊಂಡಾಲದ ಶಬ್ಬೀರ್ ಎಂಬವರ ಮಗ ಮೊಹಮ್ಮದ್ ಶಫೀಕ್(20) ಹಾಗೂ ಅವರ ಪತ್ನಿ ಸಫಿಯಾ(50) ಎಂದು ಗುರುತಿಸಲಾಗಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತವಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!