May 6, 2026

ಪ್ಯಾಂಟ್, ಟೀ ಶರ್ಟ್‍ಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: 1.96 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ

0
image_editor_output_image161248014-1716279876511.jpg

ಬೆಂಗಳೂರು:‌ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿಮಾಡಿದ್ದಾರೆ.

ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದುಬೈನಿಂದ ಬಂದ ಮೂವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‍ಗಳಲ್ಲಿ ಪೇಸ್ಟ್ ರೀತಿ ಚಿನ್ನವನ್ನು ಅಕ್ರಮವಾಗಿ ಅಡಗಿಸಿಟ್ಟುಕೊಂಡಿರುವುದು ಪತ್ತೆಯಾಗಿದೆ.

ನಾಲ್ಕು ಜನ ಪ್ರಯಾಣಿಕರ ಬಳಿ ಬರೋಬ್ಬರಿ 2 ಕೆಜಿ 864 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!