May 5, 2026

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಪ್ರಕರಣ ದಾಖಲು: ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಠಾಣೆಗೆ ಆದ ಗತಿ ಬೆಳ್ತಂಗಡಿ ಠಾಣೆಗೆ ಕಾಣಿಸ್ತೇವೆ ಎಂದಿದ್ದ ಹರೀಶ್ ಪೂಂಜ

0
pro.webp

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಶಶಿರಾಜ್ ಶೆಟ್ಟಿ ಎಂಬಾತನ ಬಂಧನವನ್ನು ವಿರೋಧಿಸಿ ನಡೆದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ, ಕಾನೂನುಬಾಹಿರವಾಗಿ, ಬೆಳ್ತಂಗಡಿ ವಿಕಾಸ ಸೌದದ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಎಂದು ಆರೋಪಿಸಲಾಗಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮತ್ತು ಇತರರು, ಜನರನ್ನು ಗುಂಪು ಸೇರಿಸಿ, ಪ್ರತಿಭಟನಾ ಸಭೆ ನಡೆಸಿದ್ದು, ಪ್ರತಿಭಟನಾ ಸಭೆಯಲ್ಲಿ, ಹರೀಶ್ ಪೂಂಜರವರು, ಪ್ರಸ್ತುತ ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ, ಪೊಲೀಸರ ಕಾಲರ್ ಹಿಡಿಯಲು ಸಿದ್ದನೆಂದು ಹಾಗೂ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಸಿ, ಸಾರ್ವಜನಿಕ ನೌಕರರಾದ, ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಲೂಕು ಕಚೇರಿಗೆ ತಮ್ಮ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಹೋಗದಂತೆ ತಡೆಯೊಡ್ಡಿರುತ್ತಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ..

Leave a Reply

Your email address will not be published. Required fields are marked *

error: Content is protected !!