May 6, 2026

ಮಡಿಕೇರಿ: ಮೊಬೈಲ್ ಗೆ ಬಂದ ಖಾಲಿ ಮೆಸೇಜ್ ಕ್ಲಿಕ್: 15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ DYSP

0
image_editor_output_image-1463615484-1716357361542.jpg

ಹಾಸನ: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.

ಮಡಿಕೇರಿಯ ಕೆನರಾ ಬ್ಯಾಂಕ್ ಮುಖ್ಯಶಾಖೆ ಹಾಗೂ ಭಾಗಮಂಡಲದ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ.

ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!