ಮಹಿಳೆಯೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಕಾನ್‌ಸ್ಟೇಬಲ್
ಹುಬ್ಬಳ್ಳಿ: ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಕಾನ್‌ಸ್ಟೇಬಲ್ ಮತ್ತು ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ನವನಗರದ ಶಿವಾನಂದ ನಗರದಲ್ಲಿ ನಡೆದಿದೆ.
ಧಾರವಾಡ ಸಂಚಾರಿ ಠಾಣೆಯ ಕಾನ್‌ಸ್ಟೇಬಲ್ ಮಹೇಶ್ ಹೆಸರೂರ್ (31) ಮತ್ತು ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು.
ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿ ಕಾನ್‌ಸ್ಟೇಬಲ್ ಮಹೇಶ್, ಮದುವೆ ಆಗಿದ್ದರೂ ವಿವಾಹಿತ ಮಹಿಳೆಯೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ.




