March 17, 2026

ಜಾತ್ರೆಯ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥ

0
image_editor_output_image-1021897364-1716359642720.jpg

ಬೆಳಗಾವಿ: ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಗ್ರಾಮದ ಜನ ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದರು. ಆದರೆ ಪ್ರಸಾದ ಸೇವಿಸಿದವರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ ಆರಂಭವಾಗಿದೆ. ಕೂಡಲೇ ಅಸ್ವಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ, ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!