ತೆಲಂಗಾಣ: ಹೈದರಾಬಾದ್ ನ ಎಸಿಪಿ ಮನೆಯ ದಾಳಿ, ಚಿನ್ನ, ಬೆಳ್ಳಿ ಸೇರಿದಂತೆ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ
ತೆಲಂಗಾಣ: ಹೈದರಾಬಾದ್ ನ ಎಸಿಪಿ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದೆ.
ಚಿನ್ನ, ಬೆಳ್ಳಿ ಸೇರಿದಂತೆ 3.5 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ದೂರಿನ ಆಧಾರದ ಮೇಲೆ ಸೆಂಟ್ರಲ್ ಕ್ರೈಮ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿರುವುದಾಗಿ ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.




