March 17, 2026

ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ: ರಘುಪತಿ ಭಟ್

0
image_editor_output_image-766837189-1716444430219.jpg

ಶಿವಮೊಗ್ಗ: ‘ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ನನಗೆ ಟಿಕೆಟ್ ಕೊಡುತ್ತೇವೆ ಎಂದು ಕೈಕೊಟ್ಟಿದ್ದಾರೆ. ನನಗೆ ಬಕೆಟ್ ಹಿಡಿಯುವ ಸಂಸ್ಕೃತಿ ಗೊತ್ತಿಲ್ಲ’ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷದಲ್ಲಿ ವ್ಯವಸ್ಥೆ ಬದಲಾವಣೆ ಆಗಬೇಕಿದೆ. ಮೊದಲು ಟಿಕೆಟ್ ಕೊಡಲು ಬೂತ್‌ಮಟ್ಟದಿಂದ ಅಭಿಪ್ರಾಯ ಪಡೆಯುತ್ತಿದ್ದರು. ಆದರೆ ಇದೀಗ ಅದನ್ನು ಮಾಡುತ್ತಿಲ್ಲ. ಅಭಿಪ್ರಾಯ ಕೇಳದೆ ಟಿಕೆಟ್ ಹಂಚಿಕೆ ಮಾಡುತ್ತಿದ್ದಾರೆ. ಪರಿವಾರದ ಪ್ರಮುಖರ ಸಲಹೆಯನ್ನು ಸಹ ಪರಿಗಣಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!