March 17, 2026

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತಿದ್ದ ವ್ಯಕ್ತಿಗೆ ಸಿಡಿಲು ಬಡಿದು ಮೃತ್ಯು

0
current_3038124_835x547-m

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.

ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ ( 43) ಮೃತಪಟ್ಟ ವ್ಯಕ್ತಿ.

‌‌‌‌‌ ಸತೀಶ್ ‌ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ಇಂದು ಬೆಳಿಗ್ಗೆ ಕೆಲಸಕ್ಕೆ ತೆರಳುವ ಉದ್ದೇಶದಿಂದ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಪಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು , ಒಮ್ಮೆಲೇ ವಿದ್ಯುತ್ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!