ಶಿವಮೊಗ್ಗ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು
ಶಿವಮೊಗ್ಗ: ಕೃಷಿಯ ಕೆಲಸ ಮಾಡುತ್ತಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದುರ್ಮರಣ ಹೊಂದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಚನ್ನಹಳ್ಳಿ ಗ್ರಾಮದ ಹೊಲದಲ್ಲಿ ನಡೆದಿದೆ.
ಅಭಯ್(16), ಮಾಲತೇಶ್(27) ಮೃತ ದುರ್ದೈವಿಗಳು.
ಶಿವಮೊಗ್ಗ ತಾಲೂಕಿನ ಚನ್ನಹಳ್ಳಿ ಗ್ರಾಮದ ಹೊಲದಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿದ್ದವು. ಈ ವೇಳೆ ಬಾಲಕ ಅಭಯ ಕೂಡ ಇಂದು ಪೋಷಕರ ಹೊಲದಲ್ಲಿ ಕೃಷಿ ಕೆಲಸಕ್ಕೆ ಸಹಾಯ ಮಾಡಲು ತೆರಳಿದ್ದನು.
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




