ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್: ವೀಡಿಯೊ ವೈರಲ್
ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.
ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.




