March 24, 2026

ಪುತ್ತೂರು : ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಮೃತ್ಯು

0
image_editor_output_image-25093787-1716619754508.jpg

ಪುತ್ತೂರು: ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ಮಂಜುಶ್ರೀ (20) ಮೃತ ಯುವತಿ. ಮಂಜುಶ್ರೀ ವಿವೇಕಾನಂದ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು.

ಆಕ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು.

Leave a Reply

Your email address will not be published. Required fields are marked *

error: Content is protected !!