ಚಿಕ್ಕಮಗಳೂರು: ರಸ್ತೆಯ ಡಿವೈಡರ್ಗೆ ಕಾರು ಢಿಕ್ಕಿ: 2 ವರ್ಷದ ಮಗು ಸೇರಿ ಇಬ್ಬರು ಮೃತ್ಯು
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ 2 ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ರಸ್ತೆಯ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೂಡ್ಲೂರು ಗೇಟ್ ಬಳಿ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ಮೂಲದ 2 ವರ್ಷದ ಮಗು ವಿಕ್ರಾಂತ್ ಮತ್ತು ಕಾರು ಚಾಲಕ ಪೃಥ್ವಿ(36) ಮೃತ ಪಟ್ಟಿದ್ದಾರೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.




