ದೆಹಲಿ: ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ: 6 ನವಜಾತ ಶಿಶು ಮೃತ್ಯು!
ದೆಹಲಿ: ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 6 ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ ಮತ್ತು 11 ಜನರನ್ನು ರಕ್ಷಿಸಲಾಗಿದೆ.
ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಪ್ರಕಾರ, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಶನಿವಾರ ರಾತ್ರಿ 11.30 ರ ಸುಮಾರಿಗೆ ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ನವಜಾತ ಶಿಶು ಆರೈಕೆ ಆಸ್ಪತ್ರೆ ಮತ್ತು ಪಕ್ಕದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಪಿಸಿಆರ್ ಕರೆ ಬಂದಿದೆ.




