June 15, 2024

ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ: 6 ಮಂದಿ ಮೃತ್ಯು

0

ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಎಂದು ಗುರುತಿಸಲಾಗಿದೆ.

ಮೃತಪಟ್ಟ ಆರು ಮಂದಿಯೂ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ ವಾಪಸ್ ಊರಿಗೆ ಹೋಗುತ್ತಿದ್ದರು. ಈ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಹಾರಿ ಕಂಟೇನರ್‌ಗೆ ಗುದ್ದಿದ ಪರಿಣಾಮ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣಾ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಮೃತದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!