ಮೀಫ್ ವತಿಯಿಂದ ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿಗೆ ಅತ್ಯುತ್ತಮ ಕಾಲೇಜು ಪುರಸ್ಕಾರ
ಮಂಗಳೂರು: ನಗರದ ಜಪ್ಪಿನಮೊಗರು ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಸ್ಕೂಲ್ ಅಡಿಟೋರಿಯಂನಲ್ಲಿ ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ( ಮೀಫ್ ) ವತಿಯಿಂದ ನಡೆದ ‘ಮೀಫ್ ಎಕ್ಸಲೆನ್ಸ್ ಅವಾರ್ಡ್ 2024’ ರಲ್ಲಿ ಎಸ್ಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳಿಸಿದ ಉಭಯ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮತ್ತು ಶೇಖಡ 100 ಫಲಿತಾಂಶ ದಾಖಲಿಸಿದ ವಿದ್ಯಾ ಸಂಸ್ಥೆಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪಿಯುಸಿ, ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಸೀಟು, ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮುಖ್ಯ ಅತಿಥಿಯಾಗಿ ರಾಜ್ಯ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಆತೀಕ್ ಮುಂತಾದ ಮತ್ತಿತರ ಗಣ್ಯರು ಭಾಗವಹಿಸಿದ್ದು, 2023-24ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 100 ಪಲಿತಾಂಶ ದಾಖಲಿಸಿದ ಉಭಯ ಜಿಲ್ಲೆಗಳ ಕಾಲೇಜು ಗಳ ಪೈಕಿ ಶೇ.100 ಫಲಿತಾಂಶ ದಾಖಲಿಸಿದ ‘ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕ’ ಕಾಲೇಜಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹಾಗೆಯೇ ಪಿಯುಸಿಯಲ್ಲಿ ಶೇಕಡ 95 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ಅನುಗ್ರಹ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಅಮೀನತ್ ರುಕ್ಷಾನ, ರಂಝೀನ ಭಾನು, ನಹಿಮತ್ ತಸ್ನೀಮ, ಫಾತಿಮತ್ ಮುರ್ಶಿದ, ಅಜ್ಮೀಯ, ದುಲೈಖ ಮಮ್ತಾಜ್, ಹಾಗೂ ಕಲಾ ವಿಭಾಗದ ಫಾತಿಮತ್ ಶಮ್ಯರನ್ನು ‘ಮೀಫ್ ಎಕ್ಸಲೆನ್ಸ್ ಅವಾರ್ಡ್’ ನೀಡಿ ಗೌರವಿಸಲಾಯಿತು.

ಮೀಫ್ ವತಿಯಿಂದ ಉಭಯ ಜಿಲ್ಲೆಗಳ ಮೀಫ್ ಸದಸ್ಯ ಪದವಿಪೂರ್ವ ಕಾಲೇಜುಗಳಲ್ಲಿ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿ, ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ಕಾಲೇಜುಗಳ ಪೈಕಿ ಅನುಗ್ರಹ ಮಹಿಳಾ ಕಾಲೇಜಿಗೆ ದ್ವಿತೀಯ ಅತ್ಯುತ್ತಮ ಕಾಲೇಜು ಪುರಸ್ಕಾರ’ ವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಅನುಗ್ರಹ ಮಹಿಳಾ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಯಾದ ಹೈದರ್ ಅಲಿ ಮತ್ತು ಸದಸ್ಯರಾದ ಅಬ್ದುಲ್ಲ ಕುಂಜಿ ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಹೇಮಲತಾ ಬಿ.ಡಿ., ಉಪನ್ಯಾಸಕಿಯರಾದ ಸಲೀಮಮ್ಮ ಎಂ, ರಾಬಿಯ, ಹುಮೇರಾ ಖಾನಂ, ಶ್ವೇತಾ, ಅಶ್ವಿನಿ ಎ., ತಶ್ರೀಫ ಭಾಗವಹಿಸಿದ್ದರು.





