March 18, 2026

ಆಟವಾಡುತ್ತಾ ಸಂಪ್‍ಗೆ ಬಿದ್ದು 2 ವರ್ಷದ ಮಗು ಸಾವು

0
image_editor_output_image-354481714-1716789810448.jpg

ಬೆಳಗಾವಿ: ಆಟವಾಡುತ್ತಾ ಸಂಪ್‍ಗೆ ಬಿದ್ದು 2 ವರ್ಷದ ಮಗು ಸಾವನ್ನಪ್ಪಿದ ದುರ್ಘಟನೆ ನಗರದ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಮೃತಮಗುವನ್ನು ಸಾಯೀಶಾ ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಗು ಕಣ್ಮರೆಯಾಗಿದ್ದು, ಪೋಷಕರಿಗೆ ತೀವ್ರ ಹುಡುಕಾಟ ನಡೆಸಿದ್ದಾರೆ.

ಎಷ್ಟೇ ಹುಡುಕಿದರೂ ಮಗು ಕಾಣದಿದ್ದಾಗ ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡಿದೆ. ಕೂಡಲೇ ಮಗುವನ್ನು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಕರೆತರುವ ಮುನ್ನವೇ ಮಗು ಸಾವಿಗೀಡಾಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!