May 6, 2026

ಎಚ್‌.ಡಿ.ರೇವಣ್ಣ ಸೋಮವಾರ ಧರ್ಮಸ್ಥಳಕ್ಕೆ ಭೇಟಿ: ಪ್ರಜ್ವಲ್ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ….

0
image_editor_output_image495011339-1716797760188.jpg

ಧರ್ಮಸ್ಥಳ: ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಮಾತನಾಡಿದ ಎಚ್.ಡಿ.ರೇವಣ್ಣ, ನಾನು ಮಂಜುನಾಥ ಸ್ವಾಮಿಯ ಭಕ್ತ. ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರ್ತೇನೆ ಎಂದರು.

ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ. ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ ಎಂದರು.

ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದ ಅವರು, ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೇಗೌಡರು ಪತ್ರ ಬರೆದಿರೋ ಬಗ್ಗೆಯು ಗೊತ್ತಿಲ್ಲ. ಯಾವುದರ ಬಗ್ಗೆಯು ಪ್ರತಿಕ್ರಿಯೆ ನೀಡಲ್ಲ ಎಂದರು.

ದೇವಸ್ಥಾನ ಭೇಟಿ ಸಂದರ್ಭ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಜೊತೆ ಮಾತುಕತೆಯನ್ನು ನಡೆಸಿದರು.

Leave a Reply

Your email address will not be published. Required fields are marked *

error: Content is protected !!