February 3, 2026

ಉತ್ತರ ಪ್ರದೇಶ: ನವ ವಿವಾಹಿತ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ

0
3d9746ug_dead-body-generic_625x300_03_March_21.webp

ಉತ್ತರ ಪ್ರದೇಶ: ಪ್ರತಾಪಗಢ ಜಿಲ್ಲೆಯಲ್ಲಿ ಹೊಸದಾಗಿ ವಿವಾಹವಾದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕೊಹ್ದೌರ್ ಪ್ರದೇಶದ ಸರೈ ಶಂಕರ್ ಚಿಗುಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರು ತಿಂಗಳ ಹಿಂದೆ ದೇವಸ್ಥಾನದಲ್ಲಿ ವಿವಾಹವಾಗಿದ್ದ ನೀಲೇಶ್ ವರ್ಮಾ (22) ಮತ್ತು ರೋಶ್ನಿ (19) ಗುರುವಾರ ವಿಷಕಾರಿ ಪದಾರ್ಥವನ್ನು ಸೇವಿಸಿದ್ದಾರೆ ಎಂದು ಸರ್ಕಲ್ ಆಫೀಸರ್ (ಸಿಒ) ಅಭಯ್ ಪಾಂಡೆ ತಿಳಿಸಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಪ್ರಯಾಗ್‌ರಾಜ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಗುರುವಾರ ರಾತ್ರಿ ಸಾವನ್ನಪ್ಪಿದರು ಎಂದು ಅವರು ಹೇಳಿದರು.

ಪೊಲೀಸರ ಪ್ರಕಾರ, ದಂಪತಿಯ ಕುಟುಂಬ ಸದಸ್ಯರು ಅವರ ಸಂಬಂಧವನ್ನು ಒಪ್ಪಲಿಲ್ಲ. ಇವರಿಬ್ಬರು ಏಕಾಏಕಿ ಈ ಕೃತ್ಯ ಎಸಗಲು ಪೊಲೀಸರು ಕಾರಣ ಹುಡುಕುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!